February 3, 2026

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ: ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಮೃತ್ಯು

0
image_editor_output_image-1208380763-1724653678073.jpg

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಖಾಸಗಿ ಬಸ್ ಹರಿದು ಹರಿದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರವಿವಾರ ರಾತ್ರಿ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ.

ಮೃತರನ್ನು ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ ನಿವಾಸಿ ಪಿ. ಶ್ರೀನೇಶ್ (39) ಎಂದು ಗುರುತಿಸಲಾಗಿದೆ.

ಪಡನ್ನ ಕ್ಯಾಡ್ ಮೇಲ್ಲೇತುವೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಞಂಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿ ನಿಂದ ಬೇಡಡ್ಕಕ್ಕೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!