August 25, 2026

ಕುಂದಾಪುರ: ಭಾರೀ ಗಾಳಿ ಮಳೆಗೆ ಬಿದ್ದ ಮರ: ರಸ್ತೆ ಬದಿಯಲ್ಲಿದ್ದ ಮಹಿಳೆ, ದನ ಸಾವು

0
image_editor_output_image-1864826813-1724655633734.jpg

ಕುಂದಾಪುರ: ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕಿ ಬಳಿ ನಡೆದಿರುವುದಾಗಿ ವರದಿಯಾಗಿದೆ.

ಕೆಂಚನೂರು ಗ್ರಾಮದ ಮೈಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರಿ ಎಂಬುವರ ಪತ್ನಿ ಸುಜಾತ ಆಚಾರ್ತಿ (53) ಸಾವನ್ನಪ್ಪಿದವರು. ಜೊತೆಗೆ ಅವರ ಮನೆಯ ದನ ಕೂಡ ಸಾವನ್ನಪ್ಪಿದೆ. ಮೃತರು ಮೂವರು ಗಂಡು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!