February 3, 2026

ಸುಳ್ಯ: ಐಶ್ವರ್ಯ ಸಾವು ಪ್ರಕರಣ: ನೂತನ‌ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ

0
image_editor_output_image-1293917618-1724655975994.jpg

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಲಾಗಿದ್ದು ನೂತನ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಪರ ಹೈಕೋರ್ಟ್‌ಗೆ ಹಿರಿಯ ವಕೀಲ ಶ್ಯಾಮ್ ಸುಂದರ್ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಜ್ಯ ಸರ್ಕಾರ ನೇಮಿಸಿದೆ.

2023ರ ಅಕ್ಟೋಬರ್ 26ರಂದು ಸುಳ್ಯ ಮೂಲದ ಐಶ್ವರ್ಯ ಗೋವಿಂದರಾಜ ನಗರದ ತಮ್ಮ ತಂದೆಯ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ವರದಕ್ಷಿಣೆ ಕಿರುಕುಳ ಆರೋಪದಡಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಡೆತ್‌ ನೋಟ್‌ನಲ್ಲಿ ತನ್ನ ಸಾವಿಗೆ ಕಾರಣರೆಂದು ಅತ್ತೆ, ಮಾವ, ಸೋದರತ್ತೆ, ಸೋದರ ಮಾವ ಸೇರಿ ಒಂಬತ್ತು ಜನರ ಹೆಸರನ್ನು ಐಶ್ವರ್ಯ ಬರೆದಿಟ್ಟಿದ್ದರು.

ಚಾರಿತ್ರ್ಯವಧೆ ಮಾಡಿ ಕಿರುಕುಳ ನೀಡಿದ್ದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದರು. ಆದ್ರೆ ಪ್ರಕರಣಕ್ಕೆ ಹೈಕೋರ್ಟಿನಲ್ಲಿ ತಡೆ ನೀಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!