ಕಾಡಬೆಟ್ಟು ಮನೆಯಲ್ಲಿ ಕಳ್ಳತನ: ಮಂಗಳೂರಿನಲ್ಲಿ ಆರೋಪಿಯ ಬಂಧನ
ಉಡುಪಿ: ಕಾಡಬೆಟ್ಟುವಿನ ಮನೆಯಲ್ಲಿ ಕಳ್ಳತನ ಮಾಡಿದ್ದ ಮಂಗಳೂರಿನ ಆರೀಫ್ ಮುನ್ನಾ ಮೊಹಮ್ಮದ್ ಆರೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಡಬೆಟ್ಟು ರಾಮಣ್ಣ ಶೆಟ್ಟಿ ಕಾಲನಿಯ ಜೀವನ ನಗರ ಎಂಬಲ್ಲಿ ಟಿ. ಪ್ರಶಾಂತ್ ಪೈ ಅವರ ನಿವಾಸದಲ್ಲಿ ಕಳ್ಳತನವಾಗಿತ್ತು.
ಆರೋಪಿಯು ಉಡುಪಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಟ್ಟು 35,964ರೂ. ಮೌಲ್ಯದ 5.400 ಗ್ರಾಂ ಚಿನ್ನಾಭರಣ ಹಾಗೂ ಕಳವು ಮಾಡಲು ಬಳಸಿದ ಹೀರೋ ಹೊಂಡಾ ಸ್ಪೆಂಡರ್ ಪ್ಲಸ್ ಬೈಕ್ ಮತ್ತು ಕಬ್ಬಿಣದ ರಾಡ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.




