ಉಡುಪಿ: ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ: ಇಬ್ಬರು ಆರೋಪಿಗಳ ಬಂಧನ
ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಸೆನ್ ಪೊಲೀಸರು ಗುಜರಾತ್ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗುಜರಾತ್ ರಾಜ್ಯದ ಸೂರತ್ ನ ನವಾದಿಯಾ ಮುಖೇಶ್ ಭಾಯಿ ಗಣೇಶ್‌ಬಾಯಿ(44) ಹಾಗೂ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯ ಧರಮ್ಮಿತ್ ಕಮಲೇಶ್ ಚೌಹಾನ್(28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್ ಪೋನ್‌ಗಳು ಹಾಗೂ 13,95,000ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.




