ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಆಹಾರ ಅರಸಿ ನಾಡಿಗೆ ಬಂದ ಗಜರಾಜ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ.
ಇಲ್ಲಿನ ಭದ್ರ ಅಭಯಾರಣ್ಯದಿಂದ ಆಹಾರ ಅರಸಿ ಬಂದ ಕಾಡಾನೆ ಬೇಲಿ ದಾಟುವ ವೇಳೆ, ಅಲ್ಲಿನ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ.
ಇನ್ನು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.




