February 3, 2026

ಸುಬ್ರಹ್ಮಣ್ಯ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ್ಯು, ಚರಂಡಿಗೆ ಬಿದ್ದ ಕಾರು

0
image_editor_output_image1621413099-1724740292717.jpg

ಸುಬ್ರಹ್ಮಣ್ಯ: ಖಾಸಗಿ ಬಸ್ಸನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಇಚ್ಲಂಪಾಡಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಅವರ ಪುತ್ರ ದೇವರಾಜ್‌ ಮೃತ ಬೈಕ್‌ ಸವಾರ.

ದೇವರಾಜ್‌ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ. ಈ ವೇಳೆ ಕಡಬ ತಾಲೂಕಿನ ನೂಜಿಬಾಳ್ತಿಲ ಬೆಥನಿ ಕಾಲೇಜು ಸಮೀಪ ಎದುರಿನಿಂದ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಓವರ್‌ಟೇಕ್‌ ಮಾಡುವ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ವಾಹನವನ್ನು ನೋಡಿ ಬ್ರೇಕ್‌ ಹಾಕಿದ್ದು, ಈ ವೇಳೆ ಬೈಕ್‌ ಸ್ಕಿಡ್‌ ಆಗಿತ್ತು. ಗಂಭೀರ ಗಾಯಗೊಂಡ ದೇವರಾಜ್‌ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ

ಬೈಕ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಇನ್ನೋವಾ ವಾಹನ ಚರಂಡಿಗೆ ಬಿದ್ದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವಾಹನಕ್ಕೆ ಹಾನಿಯಾಗಿದೆ. ಘಟನ ಸ್ಥಳಕ್ಕೆ ಕಡಬ ಠಾಣಾ ಸಬ್‌ಇನ್‌ಸ್ಪೆಕ್ಟರ್‌ ಅಭಿನಂದನ್‌ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!