ಕಡಬ: ಶಾಲಾ ಕೊಠಡಿಯ ಗೋಡೆ, ಮೇಲ್ಬಾವಣಿ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಕಡಬ: ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಬಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.




