March 24, 2026

ICC ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

0
0ovq26gg_jay-shah-bcci_625x300_27_May_24.jpg

ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯು ನವೆಂಬರ್ 30ರಂದು ಕೊನೆಗೊಳ್ಳಲಿದೆ.

ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

35 ವರ್ಷದ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಲಿದ್ದಾರೆ. ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ನಂತರ ಐಸಿಸಿಯನ್ನು ಮುನ್ನಡೆಸುವ ಭಾರತದಿಂದ ಐದನೇ ವ್ಯಕ್ತಿ ಜಯ್ ಶಾ ಆಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!