ಶಿವಮೊಗ್ಗ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಇಬ್ಬರು ಮಕ್ಕಳು ಸೇರಿ ಆರು ಮಂದಿಗೆ ಗಾಯ
ಶಿವಮೊಗ್ಗ: ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ನಿನ್ನೆ ರಾತ್ರಿ ನಡೆದಿದೆ.
ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಅಪಘಾತದಿಂದ ಕಾರಲ್ಲಿದ್ದ ಆರು ಮಂದಿಗೆ ಗಾ*ಯವಾಗಿದೆ.
ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕ ಕಾರ್ತಿಕ್ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.




