February 3, 2026

ಉಪ್ಪಿನಂಗಡಿ: ಕಳ್ಳತನ ಪ್ರಕರಣ, ಗರುಡ ಗ್ಯಾಂಗ್‌ನ ಆರೋಪಿಯ ಬಂಧನ

0
image_editor_output_image-1043891653-1724827420790.jpg

ಉಪ್ಪಿನಂಗಡಿ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಗರುಡ ಗ್ಯಾಂಗ್‌ನ ಸದಸ್ಯ ಹಾಗೂ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಆ. 27ರಂದು ಬಂಧಿಸಿದ್ದಾರೆ.

ಕಡಬ ತಾಲೂಕು ಐತ್ತೂರು ಗ್ರಾಮದ ಕಾಯರ್ತಡ್ಕ ನಿವಾಸಿ ಝಕಾರಿಯಾ ಎಂಬವರ ಪುತ್ರ ಅಬ್ದುಲ್ ಹಮೀದ್ (27) ಬಂಧಿತ ಆರೋಪಿ. 2023ರ ಅಕ್ಟೋಬರ್ 10ರಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಉಪಯೋಗಿಸುವ ಕೆ.ಎನ್.ಆರ್. ಸಂಸ್ಥೆಯ ಕಬ್ಬಿಣದ ಶೀಟ್‌ಗಳನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ.

ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನಿರ್ದೇಶನದಂತೆ ನಡೆದ ಈ ಪತ್ತೆ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ (ತನಿಖೆ- 1) ರುದ್ಮಾ ನಾಯ್ಕ, ಪೊಲೀಸ್‌ ಹೆಡ್ ಕಾನ್ಸೆಬಲ್ ಹಿತೋಶ್, ಪೊಲೀಸ್ ಸಿಬ್ಬಂದಿಗಳಾದ ಹೇಮರಾಜ್, ಗಿರೀಶ್ ರೈ, ಶಿವರಾಜ್ ಟಕ್ಕಳಿಕೆ, ಕಡಬ ಪೊಲೀಸ್ ಠಾಣಾ ಹೆಡ್ ಕಾಸ್ಟೇಬಲ್ ರಾಜು ನಾಯ್ಕ ಭಾಗವಹಿಸಿದರು.

Leave a Reply

Your email address will not be published. Required fields are marked *

error: Content is protected !!