ಕಡಬ: ಕುಂತೂರು ಸರಕಾರಿ ಶಾಲಾ ಕಟ್ಟಡ ಕುಸಿದ ಪ್ರಕರಣ: ಇಂಜಿನಿಯರ್, ಶಾಲೆಯ ಮುಖ್ಯೋಪಾಧ್ಯಾಯ ಅಮಾನತು
ಕಡಬ: ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿದ್ದಾರೆ.
ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ವಿದ್ಯಾರ್ಥಿಗಳು ಆ ಸಮಯದಲ್ಲಿ ಶಾಲಾ ಮೈದಾನದಲ್ಲಿ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಎಂದು ಗುರುತಿಸಲಾಗಿದೆ.




