February 3, 2026

ವಿಟ್ಲ: ಹೊರೈಝನ್ ಶಾಲೆ, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0
image_editor_output_image-538523469-1724830672552.jpg

ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ಮೇಗಿನಪೇಟೆ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

ಹೊರೈಝನ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಅಝೀಝ್ ಸನ ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವಿಟ್ಲ ಸಮೂಹ ಸಂಪನ್ಮೂಲ ವ್ಯಕ್ತಿ ಬಿಂದು, ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್, ಕಾರ್ಯದರ್ಶಿ ನೋಟರಿ ಅಬೂಬಕರ್ ವಿಟ್ಲ, ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ, ಲೆಕ್ಕ ಪರಿಶೋಧಕ ಹಮೀದ್ ಬದ್ರಿಯಾ, ವಿಟ್ಲ ಕೇಂದ್ರ ಜುಮಾ ಮಸೀದಿಯ ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು. ಶಿಕ್ಷಕ ಮಹಮ್ಮದ್ ಸಲ್ವಾನ್ ವಂದಿಸಿದರು. ಫರ್ಝಾನಾ ನಿರೂಪಿಸಿದರು. ವಿಟ್ಲ ಕ್ಲಸ್ಟರ್ ವಲಯದ 16 ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು‌.

Leave a Reply

Your email address will not be published. Required fields are marked *

error: Content is protected !!