ಕೊರಿಯೊಗ್ರಾಫರ್ ಪತ್ನಿಯನ್ನು ಕತ್ತು ಕೊಯ್ದು ಹತ್ಯೆಗೈದ ಪತಿ
ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಚೇರ್ ಗೆ ಕಟ್ಟಿ ಹಾಕಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ನ ಮನೆಯಲ್ಲಿ ನಡೆದಿದೆ.
ಮೃತರನ್ನು ಸಿನೆಮಾ ಕೊರಿಯೊಗ್ರಾಫರ್ ನವ್ಯಾ (24) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಪತಿ ಕಿರಣ್ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಮೂಲದ ಕಿರಣ್ ಕ್ಯಾಬ್ ಚಾಲಕನಾಗಿದ್ದ. ಖಾಸಗಿ ಶಾಲೆಯಲ್ಲಿ ಮಕ್ಕಳಿಗೆ ನೃತ್ಯ ಹೇಳಿಕೊಡುತ್ತಿದ್ದ ಮೃತ ನವ್ಯಾ ಕೊರಿಯೊಗ್ರಾಫರ್ ಆಗಿದ್ದರು.




