ಉಳ್ಳಾಲ: ರಸ್ತೆ ತಡೆ ಯತ್ನಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸೇರಿ ಕಾರ್ಯಕರ್ತರನ್ನು ವಶಕ್ಕೆ ಪೊಲೀಸರು
ಉಳ್ಳಾಲ: ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲದ ಯುವಮೋರ್ಚಾ ನೇತೃತ್ವದಲ್ಲಿ ಬುಧವಾರ ಸಂಜೆ ತೊಕ್ಕೊಟ್ಟು ಫ್ಲೈ ಓವರ್ ಕೆಳಗಡೆ ಪ್ರತಿಭಟನೆ ನಡೆಯಿತು.
ರಾಜ್ಯಪಾಲರ ವಿರುದ್ಧ ಮಾತನಾಡಿರುವ ಬಗ್ಗೆ ಐವನ್ ಡಿಸೋಜ ವಿರುದ್ಧ ದೂರು ಸಲ್ಲಿಸಿದರೂ ಎಫ್‌ಐಆರ್ ದಾಖಲಿಸಲು ಪೊಲೀಸರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಹಾಗೂ ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ವೇಳೆ ರಸ್ತೆ ತಡೆಯಲು ಯತ್ನಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಸೇರಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಘಟನೆ ವರದಿಯಾಗಿದೆ.





