ಪತ್ನಿಯನ್ನು ಕೊಲೆ ಮಾಡಿ ನಾಟಕ ಮಾಡಿದ್ದ ಪತಿ ಬಂಧನ
ಬೆಂಗಳೂರು: ಪತಿ ತನ್ನ ಪತ್ನಿಯನ್ನು ತೋಟಕ್ಕೆ ಕರೆದುಕೊಂಡು ಹೋಗಿ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಕೊಲೆ ಮಾಡಿದ ಬಳಿಕ ಯಾರೋ ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ. ಸದ್ಯ ಇದೀಗ ಬಾಗಲೂರು ಪೊಲೀಸರು ಆರೋಪಿಯ ಕೃತ್ಯ ಬಯಲು ಮಾಡಿದ್ದು ಆರೋಪಿ ಅರೆಸ್ಟ್ ಆಗಿದ್ದಾನೆ.
ಪತ್ನಿಯನ್ನ ತಾನೇ ಕೊಲೆ ಮಾಡಿ ನಾಟಕ ಆಡ್ತಿದ್ದ ಪತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಾಷಾ(50) ಬಂಧಿತ ಕೊಲೆ ಆರೋಪಿ.
ಬಾಗಲೂರಿನ ರಜಾಕ್ ಸಾಬ್ ಪಾಳ್ಯದಲ್ಲಿ ವಾಸವಿದ್ದ ಮೆಹಬೂಬ್, ಕೂಲಿ ಕೆಲಸ ಮಾಡಿಕೊಂಡು ಪತ್ನಿ ಮುಮ್ತಾಜ್ ಜೊತೆ ವಾಸವಿದ್ದ. ಆ.25ರಂದು ಪೊಲೀಸ್ ಠಾಣೆಗೆ ಬಂದು ನನ್ನ ಪತ್ನಿ ಕೊಲೆಯಾಗಿದ್ದಾಳೆ. ಅಪರಿಚಿತ ವ್ಯಕ್ತಿಗಳು ಸೀಬೆ ತೋಟದಲ್ಲಿ ಕೊಲೆ ಮಾಡಿದ್ದಾರೆ ಎಂದು ದೂರು ಕೊಟ್ಟಿದ್ದ. ಆ.24ರಂದು ನಾನು ಫಂಕ್ಷನ್ಗೆ ಅಂತ ಹೊರಗಡೆ ಹೋಗಿದ್ದೆ. ಆ.24 ಸಂಜೆಯಿಂದ ಪತ್ನಿಗೆ ಕರೆ ಮಾಡಿದ್ರೆ ರಿಸೀವ್ ಮಾಡಿಲ್ಲ. ಬೆಳಗ್ಗೆ ತೋಟದ ಬಳಿ ಹೋದಾಗ ಪತ್ನಿ ಹೆಣವಾಗಿ ಬಿದ್ದಿದ್ದಳು. ಯಾರೋ ನನ್ನ ಪತ್ನಿಯನ್ನ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದ.





