ಟೀಂ ಇಂಡಿಯಾದ ಎಡಗೈ ವೇಗದ ಬೌಲರ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ
ಎಂಎಸ್ ಧೋನಿ ನಾಯಕತ್ವದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಟೀಂ ಇಂಡಿಯಾದ ಎಡಗೈ ವೇಗದ ಬೌಲರ್ ಬರೀಂದರ್ ಸಿಂಗ್ ಸ್ರಾನ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಬಹಳ ವರ್ಷಗಳಿಂದ ಟೀಂ ಇಂಡಿಯಾದಿಂದ ಹೊರಗಿದ್ದ ಬರೀಂದರ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಈ ಮೂಲಕ ಇಂದು ಒಂದೇ ದಿನ ಮೂವರು ಕ್ರಿಕೆಟಿಗರು ವೃತ್ತಿಜೀವನಕ್ಕೆ ವಿದಾಯ ಹೇಳಿದಂತ್ತಾಗಿದೆ. ಬರೀಂದರ್ ಸಿಂಗ್ ಸ್ರಾನ್ ಅವರಿಗೂ ಮೊದಲು ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್ ವಿಲ್ ಪುಕೊವ್ಸ್ಕಿ ಮತ್ತು ವೆಸ್ಟ್ ಇಂಡೀಸ್ ತಂಡದ ಶಾನನ್ ಗೇಬ್ರಿಯಲ್ ಕೂಡ ನಿವೃತ್ತಿ ಘೋಷಿಸಿದ್ದರು.