ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗೌತಮ್ ಅದಾನಿ
ಮುಂಬೈ: ಹುರುನ್ ಇಂಡಿಯಾ ಗುರುವಾರ ಬಿಡುಗಡೆ ಮಾಡಿರುವ 2024ರ ಭಾರತದ ಶ್ರೀಮಂತರ ಪಟ್ಟಿಯಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ, ಉದ್ಯಮಿ ಗೌತಮ್ ಅದಾನಿ ಅಗ್ರಸ್ಥಾನಕ್ಕೇರಿದ್ದಾರೆ. ಅದಾನಿ ಅವರ ಒಟ್ಟು ಸಂಪತ್ತಿನ ಮೌಲ್ಯ ₹11.6 ಲಕ್ಷ ಕೋಟಿ ದಾಟಿದೆ.
ಈ ವರ್ಷ ಎರಡನೇ ಸ್ಥಾನಕ್ಕೆ ಕುಸಿದಿರುವ ರಿಲಯನ್ಸ್ ಇಂಡಸ್ಟ್ರಿಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಸಂಪತ್ತಿನಲ್ಲಿ ಶೇ 25ರಷ್ಟು ಹೆಚ್ಚಳವಾಗಿದೆ. ಒಟ್ಟು ₹10.14 ಲಕ್ಷ ಕೋಟಿ ಮೌಲ್ಯದ ಸಂಪತ್ತಿನ ಒಡೆತನ ಹೊಂದಿದ್ದಾರೆ.





