ವಿಟ್ಲ: ಗಣೇಶೋತ್ಸವ, ಮೀಲಾದುನ್ನಬಿ ಹಿನ್ನೆಲೆ: ಇನ್ಸ್‌ಪೆಕ್ಟರ್ ನಾಗರಾಜ್ ನೇತೃತ್ವದಲ್ಲಿ ಧಾರ್ಮಿಕ ಮುಖಂಡರ ಶಾಂತಿ ಸಭೆ
ವಿಟ್ಲ: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳಿಗಾಗಿ ಜನರು ಕಾದುಕುಳಿತಿದ್ದು, ಈ ಹಬ್ಬಗಳಿಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ನಾಗರಾಜ್ ಹೆಚ್ ಇ ನೇತೃತ್ವದಲ್ಲಿ ಧಾರ್ಮಿಕ ಮುಖಂಡರ ಜೊತೆ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ನಾಗರಾಜ್ ಹೆಚ್ ಇ ಮಾತನಾಡಿ ’ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಹಬ್ಬಗಳ ಆಚರಣೆ ನಡೆಸಿಕೊಡುವಂತೆ ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿ ಕೊಡದಂತೆ ಸಂಘಟಕರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪೊಲೀಸ್ ಸಿಬ್ಬಂಧಿಗಳು, ಹಲವು ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.




