ಬೈಕಿಗೆ ಢಿಕ್ಕಿ ಹೊಡೆದ ಕಾರು: ಯುವಕ ಮೃತ್ಯು
ಮುಂಬಯಿ: ಹದಿನೇಳು ವರ್ಷದ ಯುವಕನೊಬ್ಬ ಚಲಾಯಿಸುತ್ತಿದ್ದ ಎಸ್‌ಯುವಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ಗೋರೆಗಾಂವ್ ಪ್ರದೇಶದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.
ಮೃತ ಯುವಕನನ್ನು ನವೀನ್ ವೈಷ್ಣವ್(24) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಕಾರು ಚಲಾಯಿಸುತ್ತಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದು ಜೊತೆಗೆ ಆತ ಚಲಾಯಿಸುತ್ತಿದ್ದ ಎಸ್‌ಯುವಿ ಕಾರನ್ನು ವಶಕ್ಕೆ ಪಡೆದ ಪೊಲೀಸರು ಕಾರಿನ ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ




