ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆ ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಂದೆ, ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಜೊತೆಗೆ ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಕೂಡಾ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.




