ಈರುಳ್ಳಿಯ ಬೆಲೆ ಮತ್ತಷ್ಟು ಏರಿಕೆ: ಕೆಜಿಗೆ ಎಷ್ಟು ಗೊತ್ತೇ?
ಬೆಂಗಳೂರು : ಮಳೆ ಹೆಚ್ಚಾದ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿ ಬೆಲೆ ಏರಿಕೆಯಾಗಿದೆ. ರಾಜ್ಯದಿಂದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣ ಪೂರೈಕೆಯಾಗದ ಕಾರಣ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರಿಸಿಕೊಳ್ಳಲಾಗುತ್ತಿದೆ. ಇದರ ಪರಿಣಾಮವಾಗಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿ ಬೆಲೆ 60-70 ರೂಪಾಯಿ ಆಗಿದೆ. ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯಾತೆ ಇದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಅಲ್ಲಿ ಭಾರಿ ಮಳೆಯಾಗುತ್ತಿದ್ದು ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.


