September 20, 2024

ಮಂಗಳೂರು: ಹೊಟೇಲ್‌ನಲ್ಲಿ ಯುವತಿಗೆ ಹಲ್ಲೆ

0

ಮಂಗಳೂರು : ಮಂಗಳೂರು ನಗರದ ಲಾಲ್ ಭಾಗ್‌ ನ ಹೊಟೇಲ್‌ವೊಂದರಲ್ಲಿ ಯುವತಿಗೆ ಹಲ್ಲೆಗೈದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪಾರ್ಕಿಂಗ್ ವಿಷಯದಲ್ಲಿ ಆಗಸ್ಟ್ 25ರಂದು ಈ ಘಟನೆ ನಡೆದಿದೆ. ಕಿಡಿಗೇಡಿಗಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ‌ದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸಿಸಿ ಕ್ಯಾಮೆರಾ ಪರಿಶೀಲಿಸಿ ತನಿಖೆ ಮಾಡುತ್ತಿದ್ದೇವೆ. ಅಷ್ಟೇ ಅಲ್ಲ ಯುವತಿಯ ಕಪಾಳಕ್ಕೆ ಹೊಡೆದವರು ಮತ್ತು ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!