ಅಪಾರ್ಟ್‌ಮೆಂಟ್‌ನಲ್ಲಿದ್ದ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ
ವಾಷಿಂಗ್ಟನ್: ಅಪಾರ್ಟ್‌ಮೆಂಟ್‌ವೊಂದರಲ್ಲಿ ದರೋಡೆ ಮಾಡುವಾಗ ಅಲ್ಲಿದ್ದ ವಿದ್ಯಾರ್ಥಿನಿಯನ್ನು ಭಾರತೀಯ ಮೂಲದ ವ್ಯಕ್ತಿ ಗುಂಡಿಕ್ಕಿ ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ನೇಪಾಳ ಮೂಲದ 21 ವರ್ಷದ ವಿದ್ಯಾರ್ಥಿನಿ ಹತ್ಯೆಯಾಗಿದ್ದಾಳೆ. 52 ವರ್ಷದ ಬಾಬಿ ಸಿನ್ಹ್ ಶಾ ಗುಂಡಿಟ್ಟು ಕೊಂದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 5:30 ರ ಸುಮಾರಿಗೆ ಸಮುದಾಯ ಕಾಲೇಜು ವಿದ್ಯಾರ್ಥಿನಿ ಮುನಾ ಪಾಂಡೆ ತನ್ನ ಹೂಸ್ಟನ್ ಅಪಾರ್ಟ್‌ಮೆಂಟ್‌ನಲ್ಲಿ ಗುಂಡೇಟಿಗೆ ಬಲಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.