ಬಂಟ್ವಾಳ: ಮೆಲ್ಕಾರ್ ಸಮೀಪದ ಕಾರು, ಲಾರಿ ಮುಖಾಮುಖಿ ಢಿಕ್ಕಿ: ಕಾರು ಚಾಲಕ ಗಂಭೀರ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕ್ರೆಟ್ಟಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಎರಡೂ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಜಿಪ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಬೋಳಂಗಡಿಯ ಮುಸ್ತಾಫ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಕಾರಿನಲ್ಲಿದ್ದ ಮುಸ್ತಾಫ ಅವರಿಗೆ ಗಂಭೀರ ಗಾಯವಾಗಿದೆ.
ಅಪಘಾತ ನಡೆದ ತಕ್ಷಣ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಮುಸ್ತಾಫ ಅವರನ್ನು ಕಾರಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.





