November 9, 2026

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡರ ಜಾಮೀನು ಅರ್ಜಿ ವಜಾ

0
image_editor_output_image153895114-1725137064944.jpg

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಅವರ ಗೆಳತಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಅವರ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಶನಿವಾರ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.

ಪವಿತ್ರಾ ಗೌಡ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸೆಬಾಸ್ಟಿಯನ್, ಪವಿತ್ರಾಗೌಡಗೂ ದರ್ಶನ್ಗೆ ಒಂದು ರೀತಿಯ ಸಂಬಂಧ ಇರಬಹುದು. ಆದರೆ ರೇಣುಕಾಸ್ವಾಮಿ ಕೊಲೆಯಲ್ಲ ‌ಪವಿತ್ರಾಗೌಡ ಯಾವುದೇ ಪಾತ್ರ ವಹಿಸಿಲ್ಲ ಮತ್ತು ಮಹಿಳೆ ಎಂಬ ಕಾರಣಕ್ಕೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!