March 21, 2026

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲು

0
pro.webp

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.

೨೦೨೩ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಹೋಟೆಲ್ ಒಂದಕ್ಕೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಳ್ಳುತ್ತಿದ್ದರು. ಅಭಲೆಯಾದ ತನ್ನ ಪುತ್ರಿಗೆ ಜೀವನ ಪೂರ್ತಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ನಂಬಿಸಿ ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿ ಬಳಸಿಕೊಳ್ಳುತ್ತಿದ್ದರು. ಅವರೊಂದಿಗೆ ಇದ್ದ ಕ್ಷಣಗಳ ಛಾಯಾ ಚಿತ್ರ, ಸೆಲ್ಫಿ, ಆಡಿಯೋ, ವಿಡಿಯೋ ಗಳು ಇದೆಯೆಂದು ಹೇಳಿಕೊಂಡು ಬೆದರಿಸಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು.

೨೦೨೪ರ ಲೋಕಸಭಾ ಚುನಾವಣೆಯ ಬಳಿಕ ಮಾತುಕತೆ ಕಡಿಮೆ ಮಾಡಿದ್ದಾರೆ. ಭಯಗೊಂಡು ನಾನು ಪುತ್ತೂರಿಗೆ ವಾಸ ಬದಲಾವಣೆ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಉದ್ಯೋಗ ಹಾಗೂ ವರಮಾನವಿಲ್ಲದೆ ಬಾಡಿಗೆ ಮನೆಯಲ್ಲಿದ್ದುಕೊಂಡು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!