ಮುಡಾ ಪ್ರಕರಣ: ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸೆ.9ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 9ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಸುದೀರ್ಘ ವಾದ- ಪ್ರತಿವಾದವನ್ನು ಆಲಿಸಿ ವಿಚಾರಣೆಯನ್ನು ಮುಂದೂಡಲಾಗಿದೆ.





