ಆರೋಪಿಗಳ ಮನೆಯ ಮೇಲೆ ಬುಲ್ಡೋಜರ್ ಕಾರ್ಯಚರಣೆ ಬಗ್ಗೆ ಸುಪ್ರೀಂ ಕೋರ್ಟ್ ಗರಂ
ನವದೆಹಲಿ: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರವು ಅವರ ಮನೆಗಳನ್ನು ನೆಲಸಮಗೊಳಿಸುವ ಕ್ರಮದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ವ್ಯಕ್ತಿ ಅಪರಾಧಿ ಎಂಬ ಕಾರಣಕ್ಕೆ ಒಬ್ಬರ ಮನೆಯನ್ನು ಹೇಗೆ ಕೆಡವಲಾಗುತ್ತದೆ’ ಎಂದು ಪ್ರಶ್ನಿಸಿದೆ.
ಈ ಸಂಬಂಧಿ ಇಡೀ ದೇಶಕ್ಕೆ ಅನ್ವಯವಾಗುವ ಮಾರ್ಗಸೂಚಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ವಿವಿಧ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಬುಲ್ಡೋಜರ್ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ವಿದ್ವಾಂಸರ ಸಂಸ್ಥೆ ಜಮೀಯತ್ ಉಲಮಾ-ಎ-ಹಿಂದ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಗವಾಯಿ ಅವರು “ಆರೋಪಿ ಎಂಬ ಕಾರಣಕ್ಕೆ ಹೇಗೆ ಕೆಡವುತ್ತೀರಿ? ಅಪರಾಧಿಯಾಗಿದ್ದರೂ ಮನೆ ಕೆಡವಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಗೆ ಈ ಬಗ್ಗೆ ಸೂಚಿಸಿದ್ದರೂ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಾಣುತ್ತಿಲ್ಲ” ಎಂದು ಅರ್ಜಿಯ ವಿಚಾರಣೆ ವೇಳೆ ಟೀಕಿಸಿದರು.





