ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ: ಇಬ್ಬರು ಮಹಿಳಾ ಯಾತ್ರಿಕರು ಮೃತ್ಯು
ಜಮ್ಮು&ಕಾಶ್ಮೀರ: ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ ಸಂಭವಿಸಿದ್ದು, ಇಬ್ಬರು ಮಹಿಳಾ ಯಾತ್ರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 2.35ರ ಸುಮಾರಿಗೆ ವೈಷ್ಣೋದೇವಿ ದೇಗುಲದದಿಂದ ಮೂರು ಕಿ.ಮೀ ದೂರದ ಪಂಚಿ ಬಳಿಯ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಗುಲಕ್ಕೆ ತೆರಳುತ್ತಿದ್ದ ವೇಳೆ ಭೂಕುಸಿತ ಸಂಭವಿಸಿದ್ದರಿಂದ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಿಯಾಸಿ ಉಪ ಆಯುಕ್ತ ವಿಶೇಷ್‌ಪಾಲ್ ಮಹಾಜನ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.





