ಬೆಳ್ತಂಗಡಿ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ ಮೃತ್ಯು
ಬೆಳ್ತಂಗಡಿ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ, ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಉಜಿರೆ ರಥಬೀದಿ ಸಮೀಪದ ನಿವಾಸಿ ಸುಪ್ರಭಾ ಪಿ. (40) ಮೃತ ಶಿಕ್ಷಕಿ. ಚಾರ್ಮಾಡಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಶನಿವಾರ ತಮ್ಮ ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟರು. ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ.





