ಬಂಟ್ವಾಳ: ಗ್ಯಾಸ್ ಸಿಲಿಂಡರ್ ಕಳವು ಪ್ರಕರಣ, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟ ನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠ಼ಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.
ಮಂಗಳೂರು ಕೋಟೆಕಾರ್ ನಿವಾಸಿ ಶರೀಫ್ ಸಿ ಅಬ್ಬಾಸ್ ( 54) ಬಂಧಿತ ಆರೋಪಿ.
2002 ರಲ್ಲಿ ಬಿಸಿರೋಡಿನ ಭದ್ರಾ ಗ್ಯಾಸ್ ಏಜನ್ಸಿಯಿಂದ ಗ್ಯಾಸ್ ಸಿಲಿಂಡರ್ ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನಿಗೆ ಶಿಕ್ಷೆಯಾಗಿತ್ತು.
ಶಿಕ್ಷೆಗೊಳಪಟ್ಟ ನಂತರ ಈತ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನನ್ನು ಮಂಗಳೂರಿನ ಬೈಕಂಪಾಡಿ ಎಂಬಲ್ಲಿ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಈತನಿಗೆ 1 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ ದಂಡ ವಿಧಿಸಿರುತ್ತದೆ.
ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಎಸ್. ಐ.ರಾಮಕೃಷ್ಣ ಅವರ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಗಣೇಶ್ ,ರಾಜೇಶ್ ಮತ್ತು ಇರ್ಶಾದ್ ಅವರು 22 ವರ್ಷಗಳ ಹಳೆಯ ಕಾಲದ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.





