ಶಿವಮೊಗ್ಗ: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಖಾಸಗಿ ಕಾಲೇಜಿನ ಉಪನ್ಯಾಸಕನ ಬಂಧನ
ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿನಿಮೇಲೆ ಅತ್ಯಾಚಾರ ನಡೆಸಿರುವ ಆರೋಪ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಕೇಳಿಬಂದಿದೆ.
ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ ಎಂಬಾತ ವಿದ್ಯಾರ್ಥಿನಿಗೆ ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ವಿದ್ಯಾರ್ಥಿನಿಯ ಸ್ನೇಹ ಸಂಪಾದಿಸಿದ್ದಾನೆ. ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.





