May 6, 2026

ಮಂಗಳೂರು: CPIM ಹಿರಿಯ ಮುಖಂಡ ಕಾಂ.ರಾಘವ ಅಂಚನ್ ನಿಧನ

0
image_editor_output_image1044513999-1725354567734.jpg

ಮಂಗಳೂರು : CPIM ಹಿರಿಯ ಸದಸ್ಯ ತನ್ನ ಕೊನೆಯ ಕಾಲಾವಧಿವರೆಗೂ ಕಮ್ಯೂನಿಷ್ಟ್ ಚಳುವಳಿಯಲ್ಲಿ ಸಕ್ರಿಯರಾಗಿ ಭಾಗವಹಿಸಿರುವ ಕಾಂ.ರಾಘವ ಅಂಚನ್ ಬಜಾಲ್ ( 85 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಕಾಂ ರಾಘವ ಅಂಚನ್ ರವರು ಪತ್ನಿ ನಾಲ್ಕು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಪಕ್ಕಲಡ್ಕ ದಲ್ಲಿ ಹುಟ್ಟಿ ಬೆಳೆದಿರುವ ರಾಘವ ಅಂಚನ್ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು ಬೀಡಿ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು.

Leave a Reply

Your email address will not be published. Required fields are marked *

error: Content is protected !!