ಆಝಾನ್ ಕೇಳಿದಾಗ ಭಾಷಣವನ್ನು ಅರ್ಧಕ್ಕೇ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಝಾನ್ ಕೇಳಿ ತಮ್ಮ ಭಾಷಣವನ್ನು ಅರ್ಧಕ್ಕೇ ನಿಲ್ಲಿಸಿದ ಘಟನೆ ಶಿವಾಜಿನಗರದಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ ಆಜಾನ್ ಸದ್ದು ಕೇಳಿಸಿದೆ. ಆಜಾನ್ ಕೂಗು ಕೇಳಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತ ಪ್ರಸಂಗದ ವಿಡಿಯೋ ವೈರಲ್ ಆಗತೊಡಗಿದೆ.





