February 2, 2026

ಮದ್ರಾಸ್ ಹೈಕೋರ್ಟ್ ನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

0
750x450_833452-untitled1.webp

ಚೆನ್ನೈ: ಬೆಂಗಳೂರಿನ ರಾಮೇಶ್ವರಂ ಕೆಫೆ ಪ್ರಕರಣ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು ಅಲ್ಲದೆ ಶೋಭಾ ವಿರುದ್ಧ ಕೇಸ್ ಕೂಡ ದಾಖಲಾಗಿತ್ತು. ಇದೀಗ ಮದ್ರಾಸ್ ಹೈಕೋರ್ಟ್ ನಲ್ಲಿ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದಾರೆ.

ಇದೀಗ ಈ ಪ್ರಕರಣದ ಅರ್ಜಿ ವಿಚಾರಣೆ ಮದ್ರಾಸ್ ಹೈಕೋರ್ಟ್ ನಲ್ಲಿ ನಡೆದಿದ್ದು, ಶೋಭಾ ಕರಂದ್ಲಾಜೆ ಪರ ವಕೀಲರು ಸಚಿವರು ಕ್ಷೆಯಾಚಿಸುವುದಾಗಿ ಹೈಕೋರ್ಟ್ ನಲ್ಲಿ ತಿಳಿಸಿದ್ದರು. ಅದರಂತೆ ಶೋಭಾ ಕರಂದ್ಲಾಜೆ, ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಇಲ್ಲಿನ ಜನತೆ ಬಗ್ಗೆ ನನಗೆ ಗೌರವವಿದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯಿಂದ ನೋವುಂಟಾಗಿದ್ದಕ್ಕೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!