ಬಟ್ಟೆ ಅಂಗಡಿಗಳಲ್ಲಿ ದುಬಾರಿ ಬೆಲೆಯ ಸೀರೆಗಳ ಕಳವು: ನಾಲ್ವರು ಆರೋಪಿಗಳ ಬಂಧನ
ಬೆಂಗಳೂರು: ದುಬಾರಿ ಬೆಲೆಯ ಸೀರೆಗಳನ್ನು ಕದ್ದು ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 17.5 ಲಕ್ಷ ಬೆಲೆಬಾಳುವ 38 ರೇಷ್ಮೆ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಜಾನಕಿ, ಪೊನ್ನುರು ಮಲ್ಲಿ, ಮೇಧ ರಜಿನಿ ಹಾಗೂ ವೆಂಕಟೇಶ್ವರಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಬಟ್ಟೆ ಖರೀದಿಸುವ ನೆಪದಲ್ಲಿ ಅಂಗಡಿಗೆ ತೆರಳುತ್ತಿದ್ದ ಈ ಮಹಿಳೆಯರು ಅಂಗಡಿಯ ಸಿಬ್ಬಂದಿಯ ಗಮನ ಬೇರೆಡೆಗೆ ಸೆಳೆದು ಸೀರೆ ಕದ್ದು ಪರಾರಿಯಾಗ್ತಿದ್ರಂತೆ.
ಜೆ.ಪಿ. ನಗರ ಠಾಣಾ ವ್ಯಾಪ್ತಿಯ ಸಿಲ್ಕ್ ಹೌಸ್ ವೊಂದರಲ್ಲಿ ಸೀರೆ ಖರೀದಿ ನೆಪದಲ್ಲಿ ಬಂದ ಆರು ಮಂದಿ ಆರೋಪಿಗಳು ದುಬಾರಿ ಬೆಲೆಯ ರೇಷ್ಮೆ ಸೀರೆ ತೋರಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಸೀರೆಗಳನ್ನ ತೋರಿಸುವಾಗಲೇ ಕೈಚಳಕ ತೋರಿಸಿ ಸಿಬ್ಬಂದಿಗಳ ಗಮನ ಬೇರೆಡೆ ಸೆಳೆದು 8 ಹೊಸ ಸೀರೆಗಳನ್ನು ತಮ್ಮ ಸೀರೆಯೊಳಗೆ ಅಡಗಿಸಿಟ್ಟುಕೊಂಡು ಸ್ಥಳದಿಂದ ಪರಾರಿಯಾಗಿತ್ತು.





