ವಿಟ್ಲ; ಹೊರೈಝನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ವಿಟ್ಲ; ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನವನ್ನು ಶಾಲೆಯ ಅಧ್ಯಕ್ಷ ಅಝೀಝ್ ಸನ ಇವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಶಾಲೆಯ ಕಾರ್ಯದರ್ಶಿ ನೋಟರಿ ಅಬೂಬಕರ್ ಶಿಕ್ಷಕರ ಮಹತ್ವ, ಶಿಕ್ಷಕ ವೃತ್ತಿಯ ಘನತೆ ಗೌರವ ಹಾಗೂ ಜವಾಬ್ದಾರಿಯ ಬಗ್ಗೆ ಮಾತನಾಡಿದರು.
ಈ ಸಂದರ್ಭ ಎಲ್ಲಾ ಶಿಕ್ಷಕ ಶಿಕ್ಷಕಿಯರನ್ನು ಹೂ ಗುಚ್ಚ ನೀಡಿ ಗೌರವಿಸಲಾಯಿತು.
ಮಸೀದಿಯ ಕೋಶಾಧಿಕಾರಿ ಶರೀಫ್ ಪೊನ್ನೋಟು, ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ, ಟ್ರಸ್ಟಿ ಇಸಾಕ್ ಸಾಹೇಬ್ ಉಪಸ್ಥಿತರಿದ್ದರು.
ಶಾಲೆಯ ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ ಸ್ವಾಗತಿಸಿದರು. ಲೆಕ್ಕ ಪರಿಶೋಧಕ ಹಮೀದ್ ಬದ್ರಿಯಾ ವಂದಿಸಿದರು.
ಮುಖ್ಯ ಶಿಕ್ಷಕ ಮನಾಝಿರ್ ಮತ್ತು ಉಪ ಮುಖ್ಯ ಶಿಕ್ಷಕಿ ಗಾಯತ್ರಿ ನಿರೂಪಿಸಿದರು..





