ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಕಾಣಿಸಿಕೊಂಡ ಮೊಸಳೆ: ಸ್ಥಳೀಯರಲ್ಲಿ ಆತಂಕ
ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ನೇತ್ರಾವತಿ ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೊಸಳೆ ಪ್ರತ್ಯಕ್ಷವಾಗಿರೋದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಇಳಂತಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಫಯಾಝ್ ಯು ಟಿ ಅವರು ಸಂಜೆ ವೇಳೆ ನದಿಯ ದಂಡೆಯ ಮೇಲೆ ಬೃಹತ್ ಮೊಸಳೆ ವಿಶ್ರಾಂತಿ ಪಡೆಯುತ್ತಿರುವುದನ್ನು ಗಮನಿಸಿದ್ದಾರೆ ಬಳಿಕ ಮೊಸಳೆಯ ಫೋಟೋ ಸೆರೆಹಿಡಿದ್ದಾರೆ.
ನೇತ್ರಾವತಿ ಮತ್ತು ಕುಮಾರಧಾರ ನದಿಗಳ ಸಂಗಮದಿಂದ ಸುಮಾರು 500 ಮೀಟರ್ ದೂರದಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಈ ಪ್ರದೇಶವು ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ಸಮೀಪದಲ್ಲಿದೆ, ಇಲ್ಲಿ ಪಿಂಡ ಪ್ರದಾನ ಮತ್ತು ಪವಿತ್ರ ಸ್ನಾನದಂತಹ ಆಚರಣೆಗಳನ್ನು ನಿಯಮಿತವಾಗಿ ನಡೆಸಲಾಗುತ್ತದೆ.





