ಕಡಬ: ಮನೆಯ ಪಕ್ಕದ ತೋಡಿಗೆ ಬಿದ್ದು ಯುವಕ ಮೃತ್ಯು
ಕಡಬ : ದಕ್ಷಿಣ ಕನ್ನಡದ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.
ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಮೃತಪಟ್ಟ ಯುವಕನಾಗಿದ್ದಾನೆ.
ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ಉಮೇಶ ತೋಡಿಗೆ ಬಿದ್ದಿದ್ದರು. ಈ ಸಂದರ್ಭ ತೋಡಿನಲ್ಲಿ ನೀರಿನ ಹರಿವು ಹೆಚ್ಚಳವಾಗಿತ್ತು ಎನ್ನಲಾಗಿದೆ. ಬಳಿಕ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಉಮೇಶ್ ಅವರ ಮೃತದೇಹ ಪತ್ತೆಯಾಗಿತ್ತು.





