ಕುಂದಾಪುರ: ಆರೋಗ್ಯ ಕೇಂದ್ರದ ಆರೋಗ್ಯ ವೀಕ್ಷಣಾಧಿಕಾರಿ ಲಾಡ್ಜ್ ನಲ್ಲಿ ಆತ್ಮಹತ್ಯೆ
ಕುಂದಾಪುರ: ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿ ಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಆರೋಗ್ಯ ವೀಕ್ಷಣಾಧಿಕಾರಿಯನ್ನು ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ.
ಆದರೆ ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದು, ಮಲಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಆತ ಯಾವುದೋ ವಿಷ ಪದಾರ್ಥ ಸೇವಿಸಿರಬಹುದು ಎಂದು ಅಂದಾಜಿಸಲಾಗಿದೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.





