February 3, 2026

ಮಂಗಳೂರು: ಬೈಕ್ ಸ್ಕಿಡ್ ಆಗಿ ಇಬ್ಬರು ಸವಾರರು‌‌ ಮೃತ್ಯು

0
n6297445601725608447636703fa1419b6c91ad08653fef36167a51e70d8b48e7e7b466ccfc6e61fcd7741b.jpg

ಮಂಗಳೂರು: ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ.

ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಅವಘಡ ಸಂಭವಿಸಿದ್ದು, ಕೋಡಿಕಲ್ ನಿವಾಸಿ ಕಾಶೀನಾಥ್ (17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತರು.

ಬೈಕ್ ಲಾರಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದಾಗಿ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!