ರಸ್ತೆ ಅಪಘಾತ: ಗಣೇಶ ಉತ್ಸವಕ್ಕೆ ಊರಿಗೆ ಬಂದಿದ್ದ ಮೂವರು ಮೃತ್ಯು
ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದೆ.
ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.





