November 22, 2024

ಯೂಟ್ಯೂಬ್ ವೀಡಿಯೊ ನೋಡಿ ಸರ್ಜರಿ ಮಾಡಿದ ವೈದ್ಯ: ಆಪರೇಷನ್ ಬಳಿಕ ಬಾಲಕ ಸಾವು

0

ಪಾಟ್ನಾ: ಯೂಟ್ಯೂಬ್ ನೋಡಿ ನಕಲಿ ವೈದ್ಯ ಸರ್ಜರಿ ಮಾಡಿದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಸರನ್ ಎಂಬಲ್ಲಿ ನಕಲಿ ವೈದ್ಯ ಯೂಟ್ಯೂಬ್ ವೀಡಿಯೋವನ್ನು ಅನುಸರಿಸಿ ಬಾಲಕನ ಪಿತ್ತಕೋಶದಲ್ಲಿರುವ ಕಲ್ಲನ್ನು ತೆಗೆಯುವುದಕ್ಕೆ ಆಪರೇಷನ್ ಮಾಡಿದ್ದಾರೆ.

ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಬಾಲಕನನ್ನು ಪಾಟ್ನಾದ ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಕ್ಕೆ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದಾರೆ. ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದು, ದೇಹವನ್ನು ಆಸ್ಪತ್ರೆಯಲ್ಲಿ ಬಿಟ್ಟು ವೈದ್ಯರು ಹಾಗೂ ಜೊತೆಗಿದ್ದವರು ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!