ಸಿದ್ದರಾಮಯ್ಯರ ಪ್ರತಿಕೃತಿಗೆ ಚಪ್ಪಲಿ ಏಟು, ಬೆಂಕಿ ಹಚ್ಚಿದ ಪ್ರಕರಣ: ಉಡುಪಿ ಶಾಸಕ ಯಶ್ಪಾಲ್ ಸೇರಿ 11 ಮಂದಿ ವಿರುದ್ಧ FIR
ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಾಂಶುಪಾಲರಿಗೆ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಸೆ.6ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಸಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು.
ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು. ಈ ಸಂದರ್ಭ ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು.




