ಪುತ್ತೂರು ಪೊಲೀಸ್ ಠಾಣಾ ನೂತನ ಸರ್ಕಲ್ ಇನ್ ಪೆಕ್ಟರ್ ಆಗಿ ಜಾನ್ಸನ್ ಡಿಸೋಜ
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಜಾನ್ಸನ್ ಡಿ ಸೋಜ ಅವರು ಸೆ.9ರಂದು ಅಧಿಕಾರ ಸ್ವೀಕರಿಸಿದರು.
ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಅಲ್ಲಿಂದ ವರ್ಗಾವಣೆಗೊಂಡು ಪುತ್ತೂರು ನಗರ ಪೊಲೀಸ್ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕಾರವಾರ, ಭಟ್ಕಳ, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸೆವೆ ಸಲ್ಲಿಸಿದ್ದರು.




