February 3, 2026

ಕಾಸರಗೋಡು: ನೇಣು ಬಿಗಿದು ಯುವಕ ಆತ್ಮಹತ್ಯೆ

0
image_editor_output_image2028887218-1725982895378

ಕಾಸರಗೋಡು: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕನ್ಯಾಪಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಕನ್ಯಾಪಾಡಿ ಚೋಯಿಮೂಲೆಯ ಪ್ರವೀಣ್ ಕುಮಾರ್ (32) ಮೃತ ಪಟ್ಟವರು. ಮೃತರು ಕೂಲಿ ಕಾರ್ಮಿಕರಾಗಿದ್ದರು ಎನ್ನಲಾಗಿದೆ.

ಮನೆಯ ಕೋಣೆಯಿಂದ ಶಬ್ದ ಕೇಳಿಬಂದಿದ್ದು, ಮನೆಯವರು ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರವೀಣ್ ಕುಮಾರ್ ಪತ್ತೆಯಾಗಿದ್ದಾರೆ. ಕೂಡಲೇ ಬದಿಯಡ್ಕದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅದಾಗಲೇ ಪ್ರವೀಣ್ ಮೃತ ಪಟ್ಟಿದ್ದರು.

ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!