ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ
ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ.





