February 3, 2026

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಯನ್ನು ಸನ್ಮಾನಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

0
image_editor_output_image-264335192-1726045305055.jpg

ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತತ್‌ಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸಮ್ಮಾನಿಸಿದರು.

7ನೇ ತರಗತಿಯ ವಿದ್ಯಾರ್ಥಿನಿ ವೈಭವಿ ಅವರಿಗೆ ಪೇಟ, ಹಾರ ತೊಡಿಸಿ ಸಮ್ಮಾನಿಸಿದ ಜಿಲ್ಲಾಧಿಕಾರಿ ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!