December 19, 2025

ಸಾಣೂರಿನ ಮನೆಯಲ್ಲಿ ವೇಶ್ಯಾವಾಟಿಕೆ: ಹೊಸ್ಮಾರು ಸರ್ಕಾರಿ ಶಾಲೆಯ ಶಿಕ್ಷಕಿಯ ಬಂಧನ

0
image_editor_output_image-94672777-1726046531701.jpg

ಕಾರ್ಕಳ : ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ ಭಾಗಿಯಾಗಿ ಆರೋಪಿಗಳ ಪೈಕಿ ಮೂರನೇ ಆರೋಪಿ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯೊಂದರ ಶಿಕ್ಷಕಿ ಎಂಬ ಅಘಾತಕಾರಿ ಮಾಹಿತಿ ಹೊರಬಿದ್ದಿದೆ.

ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ನ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ಸಾರ್ವಜನಿಕರು ಆರೋಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ಪ್ರಭಾರ ಎಎಸ್‌ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡವರು ಸೆಪ್ಟೆಂಬರ್ 8 ರಂದು ದಿಢೀರ್ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ಕೃತ್ಯ ಬೆಳಕಿಗೆ ಬಂದಿದೆ.

ದಾಳಿ ವೇಳೆ ಸಂತ್ರಸ್ತೆಯೋರ್ವಳನ್ನು ರಕ್ಷಿಸಲಾಗಿದೆ. ಘಟನಾ ಸ್ಥಳದಿಂದ 6,000 ರೂ. ನಗದು, ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿದ್ದ ವಸ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

1ನೇ ಆರೋಪಿ ಭರತ್ ಜೈನ್ ನಾರಾವಿ ಅಲಿಯಾಸ್ ಭರತ್ ಶೆಟ್ಟಿ, 2ನೇ ಆರೋಪಿ ಉಳ್ಳಾಲದ ಸಂಪತ್ ಈತ ಯುವತಿ, ಮಹಿಳೆಯರನ್ನು ತನ್ನ ಗಾಳಕ್ಕೆ ಬಳಸಿ ಪುರುಷರಿಗೆ ಸರಬರಾಜು ಮಾಡುತ್ತಿದ್ದನೆಂಬ ಮಾಹಿತಿ ಲಭಿಸಿದೆ. 3ನೇ ಆರೋಪಿ ಈದು ಪ್ರಮೀಳಾ ವಿಜಯಕುಮಾರ್ ಜೈನ್ ಆಗಿದ್ದಾಳೆ.

ಈಕೆ ಹೊಸ್ಮಾರು ಸರಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು, ಪತಿ ಈದು ಗ್ರಾಮ ಪಂಚಾಯತ್‌ನ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ರಾಜಕೀಯ ದುರೀಣ ಎಂಬ ಮಾಹಿತಿ ತಿಳಿದುಬಂದಿದೆ. ಪ್ರಮುಖ ಆರೋಪಿ ನಾರಾವಿಯ ಭರತ್ ಜೈನ್ ಅಲಿಯಾಸ್ ಭರತ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!